ಗುವಾಹಟಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಾಳೆಯಿಂದ ಗುವಾಹಟಿಯ ಅಂತಾರಾಷ್ಟ್ರೀಯ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ಆರಂಭವಾಗಲಿದ್ದು, ಟೀಂ ಇಂಡಿಯಾ ಈಗಾಗಲೇ ಇಲ್ಲಿಗೆ ಬಂದಿಳಿದಿದೆ.ನಾಯಕ ವಿರಾಟ್ ಕೊಹ್ಲಿ, ಧೋನಿ, ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಆಟಗಾರರು ನಿನ್ನೆಯಿಂದಲೇ ಇಲ್ಲಿ ಕಠಿಣ ತಾಲೀಮು ಪ್ರಾರಂಭಿಸಿದ್ದಾರೆ.ಅಕ್ಟೋಬರ್ 21 ರಿಂದ ನವಂಬರ್ 1 ರವರೆಗೆ ಭಾರತ ವಿಂಡೀಸ್ ವಿರುದ್ಧ ಐದು ಏಕದಿನ ಪಂದ್ಯಗಳನ್ನಾಡಲಿದೆ. ಅದಾದ ಬಳಿಕ ಮೂರು ಪಂದ್ಯಗಳ ಟಿ20