ಕೊಲೊಂಬೊ: ಶ್ರೀಲಂಕಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯವನ್ನೂ ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾಗೆ ಸರಣಿ ಕ್ಲೀನ್ ಸ್ವೀಪ್ ಮಾಡಲು ಇನ್ನೊಂದು ಪಂದ್ಯ ಗೆದ್ದರೆ ಸಾಕು. ನಾಲ್ಕನೇ ಪಂದ್ಯವನ್ನು 168 ರನ್ ಗಳ ಬೃಹತ್ ಅಂತರದಿಂದ ಗೆದ್ದ ಟೀಂ ಇಂಡಿಯಾ ಸರಣಿಯಲ್ಲಿ 4-0 ಅಂತರದಿಂದ ಮುನ್ನಡೆ ಸಾಧಿಸಿತು. ಇದಕ್ಕೂ ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ ನಾಯಕ ಕೊಹ್ಲಿ ಮತ್ತು ರೋಹಿತ್ ಶರ್ಮಾ ಶತಕದ ನೆರವಿನಿಂದ ನಿಗದಿತ 50 ಓವರ್