ಮೆಲ್ಬೋರ್ನ್: ನಾಳೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಿರ್ಣಾಯಕ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾದಲ್ಲಿ ಕೊಂಚ ಬದಲಾವಣೆ ನಿರೀಕ್ಷಿಸಬಹುದಾಗಿದೆ.ಕಳೆದ ಪಂದ್ಯದಲ್ಲಿ ಹೀನಾಯವಾಗಿ ವೈಫಲ್ಯ ಕಂಡ ಯುವ ವೇಗಿ ಮೊಹಮ್ಮದ್ ಸಿರಾಜ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ. ಇನ್ನು, ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದ ವಿಜಯ್ ಶಂಕರ್ ಸ್ಥಾನ ಪಡೆದರೂ ಅಚ್ಚರಿಯಿಲ್ಲ.ಬ್ಯಾಟಿಂಗ್ ವಿಭಾಗದಲ್ಲಿ ಟೀಂ ಇಂಡಿಯಾ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಕಡಿಮೆ. ಆದರೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಬಹುದಾಗಿದೆ. ಸರಣಿ