ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ದ್ವಿತೀಯ ಪಂದ್ಯ ಇಂದು ನಡೆಯಲಿದೆ. ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯದಿಂದಾಗಿ ಹೀನಾಯ ಸೋಲುಂಡಿತ್ತು. ಬೌಲರ್ ಗಳೂ ಆರಂಭದಲ್ಲಿ ವಿಕೆಟ್ ಕೀಳಲು ವಿಫಲರಾಗಿದ್ದರು. ಭುವನೇಶ್ವರ್ ಕುಮಾರ್ ಇನ್ನಷ್ಟು ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಬೇಕಿದೆ.ಬ್ಯಾಟಿಂಗ್ ನಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದ್ದು ಸಾಕಷ್ಟು ಟೀಕೆಗೊಳಗಾಗಿತ್ತು. ಈ ಪಂದ್ಯದಲ್ಲಿ ಕೊಹ್ಲಿ ಮತ್ತೆ ಅದ್ಯಾವ ಪ್ರಯೋಗ ಮಾಡುತ್ತಾರೋ