ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದೇ ಧರ್ಮಶಾಲಾದಲ್ಲಿ ನಡೆಯಲಿದೆ.ನಿನ್ನೆಯಷ್ಟೇ ದ್ವಿತೀಯ ಟಿ20 ಪಂದ್ಯ ನಡೆದಿತ್ತು. ಈ ಪಂದ್ಯವನ್ನು ಗೆದ್ದುಕೊಂಡ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಇಂದಿನ ಪಂದ್ಯ ಭಾರತದ ಪಾಲಿಗೆ ಔಪಚಾರಿಕವಷ್ಟೇ.ಹೀಗಾಗಿ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಈ ಬಗ್ಗೆ ನಿನ್ನೆಯೇ ನಾಯಕ ರೋಹಿತ್ ಶರ್ಮಾ ಸೂಚನೆ ನೀಡಿದ್ದಾರೆ. ಅವಕಾಶ ಸಿಗದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗಲಿದೆ ಎಂದಿದ್ದಾರೆ.