ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಚೆನ್ನೈನಲ್ಲಿ ಅಂತಿಮ ಟಿ20 ಪಂದ್ಯದಲ್ಲಿ ನಡೆಯಲಿದ್ದು, ಮಹತ್ವದ ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಅಭ್ಯಾಸ ನಡೆಸಲು ವೇದಿಕೆಯಂತಾಗಿದೆ.ಈಗಾಗಲೇ ಟೀಂ ಇಂಡಿಯಾ ಸರಣಿ ಗೆದ್ದಿರುವುದರಿಂದ ಈ ಪಂದ್ಯದ ಫಲಿತಾಂಶ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಹೀಗಾಗಿ ಆಸ್ಟ್ರೇಲಿಯಾ ಸರಣಿಗೆ ಮೊದಲು ತಮ್ಮ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸಲು ಟೀಂ ಇಂಡಿಯಾಕ್ಕೆ ಸಿಕ್ಕಿದ ಅವಕಾಶವಾಗಲಿದೆ.ಹೀಗಾಗಿ ಇಂದಿನ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ