ಜಮೈಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಈ ಪಂದ್ಯವನ್ನೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಭಾರತ ಸಜ್ಜಾಗಿದೆ.ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ರವಿಚಂದ್ರನ್ ಅಶ್ವಿನ್ ರನ್ನು ಹೊರಗಿಟ್ಟಿದ್ದಕ್ಕೆ ನಾಯಕ ಕೊಹ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಆದರೆ ಈ ಪಂದ್ಯದಲ್ಲೂ ಇಬ್ಬರಿಗೆ ಸ್ಥಾನ ನೀಡುವ ಸಾಧ್ಯತೆ ಕಡಿಮೆ.ಯಾಕೆಂದರೆ ರೋಹಿತ್ ಬದಲು ರೆಹಾನೆಗೆ ಸ್ಥಾನ ನೀಡಲಾಗಿತ್ತು. ಅಶ್ವಿನ್ ಬದಲು ಜಡೇಜಾಗೆ ಅವಕಾಶ ನೀಡಲಾಗಿತ್ತು.