ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದಿನಿಂದ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಟೀಂ ಇಂಡಿಯಾ ಭಾರೀ ದಾಖಲೆಯೊಂದನ್ನು ಮಾಡಲು ಸಜ್ಜಾಗಿದೆ.ಈಗಾಗಲೇ ಎರಡು ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಈ ಪಂದ್ಯವನ್ನೂ ಗೆದ್ದರೆ ಸರಣಿ ವೈಟ್ ವಾಶ್ ಮಾಡಲಿದೆ. ಆ ಮೂಲಕ ಸತತ ಮೂರನೇ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ದಾಖಲೆ ಕೈವಶ ಮಾಡಿಕೊಳ್ಳಲಿದೆ. ಇದಕ್ಕೆ ಮೊದಲು ವೆಸ್ಟ್ ಇಂಡೀಸ್, ದ.ಆಫ್ರಿಕಾ ಸರಣಿಯನ್ನೂ ಭಾರತ