ಟೀಂ ಇಂಡಿಯಾಗೆ ಲಂಕಾ ವಿರುದ್ಧ ರೋಚಕ ಸರಣಿ ಗೆಲುವು

ಕೊಲೊಂಬೋ| Krishnaveni K| Last Modified ಬುಧವಾರ, 21 ಜುಲೈ 2021 (08:00 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 3 ವಿಕೆಟ್ ಗಳಿಂದ ಗೆದ್ದುಕೊಂಡಿದೆ.
 
Photo Courtesy: Twitter

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಆರಂಭ ಉತ್ತಮವಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕಳೆದುಕೊಂಡ ಪರಿಣಾಮ ಅಂತಿಮವಾಗಿ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 275 ರನ್ ಗಳಿಸಿತು.
 
ಈ ಮೊತ್ತ ಬೆನ್ನತ್ತಿದ್ದ ಭಾರತಕ್ಕೆ ಅಗ್ರ ಕ್ರಮಾಂಕ ಕೈಕೊಟ್ಟಿತು. ಪೃಥ‍್ವಿ ಶಾ 13, ಶಿಖರ್ ಧವನ್ 29 ರನ್ ಗಳಿಸಿ ಔಟಾದರು. ಮನೀಶ್ ಪಾಂಡೆ 37 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 53 ರನ್ ಗಳಿಸಿ ಆಧಾರವಾದರು. ಕೃನಾಲ್ ಪಾಂಡ್ಯ 35, ದೀಪಕ್ ಚಹರ್ ಅಜೇಯ 69, ಭುವನೇಶ‍್ವರ್ ಕುಮಾರ್ 19 ರನ್ ಗಳಿಸಿ ಗೆಲುವಿನ ದಡ ಮುಟ್ಟಿಸಿದರು. ಅಂತಿಮವಾಗಿ ಭಾರತ 49.1 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿತು.
ಇದರಲ್ಲಿ ಇನ್ನಷ್ಟು ಓದಿ :