ಆಂಟಿಗುವಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 318 ರನ್ ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಟೆಸ್ಟ್ ಚಾಂಪಿಯನ್ ಶಿಪ್ ನ ಮೊದಲ ಪಂದ್ಯವನ್ನೇ ಗೆದ್ದ ಸಾಧನೆ ಮಾಡಿದೆ.ದ್ವಿತೀಯ ಇನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 343 ರನ್ ಗಳಿಸಿ ಭಾರತ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ವಿಂಡೀಸ್ ಗೆಲುವಿಗೆ 419 ರನ್ ಗಳ ಬೃಹತ್ ಮೊತ್ತ ನೀಡಿತು.