ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 59 ರನ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಆರಂಭಿಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸ್ಪೋಟಕ ಆರಂಭ ನೀಡಿದರೆ ಬಳಿಕ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಸಿಡಿದು 44 ರನ್ ಗಳಿಸಿ ತಂಡಕ್ಕೆ ಆಧಾರವಾದರು.