ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 38 ರನ್ ಗಳಿಂದ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಪೃಥ್ವಿ ಶಾ ಮೊದಲ ಬಾಲ್ ನಲ್ಲೇ ಔಟಾಗಿ ನಿರಾಸೆ ಮೂಡಿಸಿದರು. ಆದರೆ ಬಳಿಕ ನಾಯಕ ಶಿಖರ್ ಧವನ್ ಉತ್ತಮವಾಗಿ ಬ್ಯಾಟಿಂಗ್ ಮಾಡಿ 46 ರನ್ ಗಳಿಸಿದರು. ಇವರಿಗೆ ತಕ್ಕ ಸಾಥ್ ನೀಡಿದ ಸೂರ್ಯಕುಮಾರ್ ಯಾದವ್ 34 ಎಸೆತಗಳಲ್ಲಿ 50 ರನ್ ಗಳಿಸಿದರು.