ದುಬೈ: ದುರ್ಬಲ ಅಫ್ಘಾನಿಸ್ತಾನ ವಿರುದ್ಧ ಏಷ್ಯಾ ಕಪ್ ಸೂಪರ್ ಫೋರ್ ಹಂತದ ಔಪಚಾರಿಕ ಪಂದ್ಯದಲ್ಲಿ ಟೀಂ ಇಂಡಿಯಾ 101 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಟೀಂ ಇಂಡಿಯಾ ಈ ಟೂರ್ನಿಯುದ್ಧಕ್ಕೂ ಈ ರೀತಿ ಸರ್ವಾಂಗೀಣ ಪ್ರದರ್ಶನ ತೋರಬೇಕೆಂದು ಅಭಿಮಾನಿಗಳು ಬಯಸಿದ್ದರು. ಆದರೆ ಸೂಕ್ತ ಕಾಲದಲ್ಲಿ ಸೂಕ್ತ ಆಟವಾಡದೇ ನಿನ್ನೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಔಪಚಾರಿಕ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್, ಬೌಲಿಂಗ್ ಘರ್ಜಿಸಿತು.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ