ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ನಡೆದ ದ್ವಿತೀಯ ಏಕದಿನ ಪಂದ್ಯವನ್ನು 5 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಂಡಿದೆ.ಜಿಂಬಾಬ್ವೆ ನೀಡಿದ್ದ 162 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಇಂದು ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಕೇವಲ 1 ರನ್ ಗೆ ವಿಕೆಟ್ ಒಪ್ಪಿಸಿದರು. ಆದರೆ ನಂತರ ಜೊತೆಯಾದ ಶಿಖರ್ ಧವನ್-ಶುಬ್ನಂ ಗಿಲ್ ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟಿತು.