ಸೈಂಟ್ ಕಿಟ್ಸ್: ಇಷ್ಟು ದಿನ ಫಾರ್ಮ್ ಗಾಗಿ ಕಿತ್ತಾಡುತ್ತಿದ್ದ ಸೂರ್ಯಕುಮಾರ್ ಯಾದವ್ ಸರಿಯಾದ ಟೈಮ್ ಗೆ ಫಾರ್ಮ್ ಕಂಡುಕೊಂಡಿದ್ದಾರೆ. ಇದರಿಂದಾಗಿ ಲಾಭವಾಗಿದ್ದು ಟೀಂ ಇಂಡಿಯಾಗೆ.ಭಾರತ-ವೆಸ್ಟ್ ಇಂಡೀಸ್ ನಡುವೆ ಮೂರನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆಲ್ಲುವುದರೊಂದಿಗೆ ಸರಣಿಯಲ್ಲಿ ಮೇಲುಗೈ ಸಾಧಿಸಿತು. . ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಮೇಯರ್ಸ್ 73 ರನ್ ಗಳಿಸಿದರು.