ಕ್ಯಾನ್ ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 11 ರನ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆಎಲ್ ರಾಹುಲ್ ಅರ್ಧಶತಕ (51) ಮತ್ತು ಕೆಳ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ತ್ವರಿತ 44 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಈ ಮೊತ್ತವನ್ನು ಬೆನ್ನತ್ತಿದ ಆಸೀಸ್ ಆರಂಭ ಉತ್ತಮವಾಗಿತ್ತು.