ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆರಿಸಿಕೊಂಡಿದೆ.ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕರಾಗಿದ್ದಾರೆ. ಖಲೀಲ್ ಅಹಮ್ಮದ್ ಮತ್ತು ಕೃನಾಲ್ ಪಾಂಡ್ಯ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.ಏಕದಿನ ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದ ಕೆಎಲ್ ರಾಹುಲ್ ಗೆ ಟಿ20 ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಸಿಕ್ಕಿದೆ.