ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಾಲ್ಕನೇ ಏಕದಿನ ಪಂದ್ಯ ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ನಡೆಯುತ್ತಿದ್ದು, ಹಲವು ವರ್ಷಗಳ ಬಳಿಕ ಇಲ್ಲಿ ಪಂದ್ಯ ನಡೆಯುತ್ತಿರುವುದು ವಿಶೇಷವಾಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಭಾರತ ಎರಡು ಬದಲಾವಣೆ ಮಾಡಿಕೊಂಡಿದ್ದು ರಿಷಬ್ ಪಂತ್ ಸ್ಥಾನಕ್ಕೆ ಕೇದಾರ್ ಜಾದವ್ ಮತ್ತು ಖಲೀಲ್ ಅಹಮ್ಮದ್ ಸ್ಥಾನಕ್ಕೆ ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿದೆ.ಹಲವು ವರ್ಷಗಳ ನಂತರ ನಡೆಯುತ್ತಿರುವ