ಮುಂಬೈ: ಐಪಿಎಲ್ ಮುಕ್ತಾಯವಾದ ಬಳಿಕ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಸಿದ್ಧತೆ ನಡೆಸಲಿದೆ.ಇಂಗ್ಲೆಂಡ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಪಂದ್ಯವಾಡಬೇಕಿದೆ. ಈ ಪಂದ್ಯಕ್ಕೆ ತಯಾರಿ ನಡೆಸಲು ಮೇ ಕೊನೆಯ ವಾರದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಗೆ ಪ್ರವಾಸ ಬೆಳೆಸಲಿದೆ.ಟೀಂ ಇಂಡಿಯಾ ಆಯ್ಕೆ ಎರಡು ವಾರಗಳೊಳಗಾಗಿ ನಡೆಯುವ ಸಾಧ್ಯತೆಯಿದೆ. ಸದ್ಯಕ್ಕೆ ತಂಡದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಖಾಲಿ ಇದೆ.