ಆಂಟಿಗಾ: ಅಂಡರ್ 19 ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಭಾರತಕ್ಕೆ ಸೆಮಿಫೈನಲ್ ಪಂದ್ಯದಲ್ಲಿ ಪ್ರಬಲ ಎದುರಾಳಿ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅಧಿಕಾರಯುತವಾಗಿ ಗೆದ್ದ ಭಾರತೀಯರಿಗೆ ಇಂದು ಆಸ್ಟ್ರೇಲಿಯಾ ಎದುರಾಳಿಯಾಗಿದೆ. ಕೂಟದುದ್ದಕ್ಕೂ ಕೊರೋನಾ ಭೀತಿಯ ನಡುವೆಯೂ ಅದ್ಭುತ ಪ್ರದರ್ಶನ ನೀಡಿರುವ ಭಾರತ ಒಂದೆಡೆಯಾದರೆ ಪ್ರಬಲ ಆಸ್ಟ್ರೇಲಿಯಾ ಇನ್ನೊಂದೆಡೆ. ಹೀಗಾಗಿ ಈ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ.ಕೊರೋನಾ ಸೋಂಕಿನಿಂದ ಬಳಲಿದ್ದ ಭಾರತೀಯ ಕ್ರಿಕೆಟಿಗರು ಚೇತರಿಸಿಕೊಂಡಿದ್ದು, ಈ ಪಂದ್ಯದಲ್ಲಿ ಪೂರ್ಣ