ಆಂಟಿಗ್ವಾ: ಪ್ರಬಲ ಆಸ್ಟ್ರೇಲಿಯಾ ತಂಡವನ್ನು 96 ರನ್ ಗಳಿಂದ ಭರ್ಜರಿಯಾಗಿ ಸೋಲಿಸಿ ಭಾರತ ಅಂಡರ್ 19 ಕ್ರಿಕೆಟ್ ತಂಡ ವಿಶ್ವಕಪ್ ಫೈನಲ್ ತಲುಪಿದೆ. ಈ ಮೂಲಕ ಸತತ ನಾಲ್ಕನೇ ಬಾರಿಗೆ ಫೈನಲ್ ತಲುಪಿದ ಸಾಧನೆ ಮಾಡಿದೆ.ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಹುಡುಗರು 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 290 ರನ್ ಗಳಿಸಿದರು. ನಾಯಕ ಯಶ್ ಧುಲ್ ಭರ್ಜರಿ ಶತಕ (110 ರನ್) ಗಳಿಸಿ ಮಿಂಚಿದರೆ