ಮುಂಬೈ: ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿಗೆ ಶ್ರೀಲಂಕಾ ವಿರುದ್ಧ ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯ ವಿಶೇಷವಾಗಿದೆ.ಈ ಪಂದ್ಯ ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಪಂದ್ಯವಾಗಿದೆ. ಈ ಮೊದಲು ಈ ಪಂದ್ಯವನ್ನು ಕೊಹ್ಲಿಗೆ ಎರಡನೇ ತವರು ಬೆಂಗಳೂರಿನಲ್ಲಿ ಆಡುವ ಅವಕಾಶ ಸಿಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಬಿಸಿಸಿಐ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಮೊದಲ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ.ಆದರೆ ಮೊಹಾಲಿಯಲ್ಲಿ ಪ್ರೇಕ್ಷಕರಿಲ್ಲದೇ ಪಂದ್ಯ ನಡೆಯಲಿದೆ.