ನವದೆಹಲಿ: ವಿರಾಟ್ ಕೊಹ್ಲಿ ಬ್ಯಾಟಿಂಗ್ ಕುರಿತು ಭಾರೀ ಅಭಿಮಾನ ಹೊಂದಿರುವವರ ಸಾಲಿನಲ್ಲಿ ಸೇರಿದ ತಜ್ಞ ಕ್ರಿಕೆಟಿಗರ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟರ್ ಇಮ್ರಾನ್ ಖಾನ್ ಕೂಡ ಸೇರಿದ್ದಾರೆ. ಕಷ್ಟದ ಪರಿಸ್ಥಿತಿಗಳಲ್ಲಿ ಬ್ಯಾಟಿಂಗ್ ಆಡುವುದಕ್ಕೆ ಸಂಬಂಧಿಸಿದಂತೆ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ಗಿಂತ ಶ್ರೇಷ್ಟರು ಎಂದು ರಾಜಕಾರಣಿಯಾಗಿ ಪರಿವರ್ತಿತರಾದ ಇಮ್ರಾನ್ ಹೇಳಿದ್ದಾರೆ.