ಅಹಮ್ಮದಾಬಾದ್: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಂದ ಬಾಲ್ ಗೇ ಪೆವಿಲಿಯನ್ ಹಾದಿ ಹಿಡಿದಿದ್ದಾರೆ. ಎರಡನೇ ಎಸೆತದಲ್ಲಿ ಬೆನ್ ಸ್ಟೋಕ್ಸ್ ಎಸೆತದಲ್ಲಿ ವಿಕೆಟ್ ಕೀಪರ್ ಫೋಕ್ಸ್ ಗೆ ಕ್ಯಾಚಿತ್ತು ಕೊಹ್ಲಿ ನಿರ್ಗಮಿಸಿದ್ದಾರೆ. ಇದರೊಂದಿಗೆ ಒಂದೇ ಸರಣಿಯಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾಗಿ ಕುಖ್ಯಾತಿಗೊಳಗಾಗಿದ್ದಾರೆ.ಇದಕ್ಕೂ ಮೊದಲು ಇಂಗ್ಲೆಂಡ್ ವಿರುದ್ಧವೇ 2014 ರ ಸರಣಿಯಲ್ಲಿ ಎರಡು ಬಾರಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಆವತ್ತು ಜೇಮ್ಸ್ ಆಂಡರ್ಸನ್