ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಂಕಾಗಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಎಂದಿನ ಫಾರ್ಮ್ ಪ್ರದರ್ಶಿಸಿ ಅಜೇಯ 73 ರನ್ ಗಳಿಸಿದರು.ಟಾಸ್ ಗೆದ್ದು ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತು. ಈ ಮೊತ್ತವನ್ನು