ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಕೊನೆಗೂ ಲಯ ಕಂಡುಕೊಂಡ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅರ್ಧಶತಕ ಗಳಿಸಿ ಟೀಕಾಕಾರರ ಬಾಯಿ ಸದ್ಯಕ್ಕೆ ಬಂದ್ ಮಾಡಿದ್ದಾರೆ.ಇದಕ್ಕೂ ಮೊದಲು ಕ್ರಿಕೆಟ್ ನಿಂದ ಕಳಪೆ ಫಾರ್ಮ್ ಜತೆಗೆ, ನಿಷೇಧ ಶಿಕ್ಷೆಗೊಳಗಾಗಿದ್ದ ರಾಹುಲ್, ನಂತರ ರಾಹುಲ್ ದ್ರಾವಿಡ್ ಕೋಚಿಂಗ್ ನಲ್ಲಿ ಭಾರತ ಎ ತಂಡದ ಪರ ಆಡಿದ್ದರು.ಇದಾದ ಬಳಿಕ ಟೀಂ ಇಂಡಿಯಾದಲ್ಲಿ ಮತ್ತೆ ಸ್ಥಾನ ಗಿಟ್ಟಿಸಿಕೊಂಡ ರಾಹುಲ್ ಮೊನ್ನೆಯ