ಮುಂಬೈ: ವಿಶ್ವಕಪ್ ಬಳಿಕ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಏಕದಿನ ಸರಣಿಗೆ ನಾಯಕ ವಿರಾಟ್ ಕೊಹ್ಲಿ ಮತ್ತು ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.ಆಗಸ್ಟ್ 3 ರಿಂದ ಏಕದಿನ ಸರಣಿ ನಡೆಯಲಿದ್ದು, ಸತತ ಕ್ರಿಕೆಟ್ ನಿಂದ ಬಳಲಿರುವ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ. ಆದರೆ ಬಳಿಕ ನಡೆಯಲಿರುವ ಟೆಸ್ಟ್ ಸರಣಿಗೆ ಉಭಯ ಆಟಗಾರರು ಮರಳುವ ಸಾಧ್ಯತೆಯಿದೆ.ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸುವ