ನಾಯಕತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ವಿರಾಟ್ ಕೊಹ್ಲಿ!

ಮುಂಬೈ| Krishnaveni K| Last Modified ಸೋಮವಾರ, 13 ಸೆಪ್ಟಂಬರ್ 2021 (09:50 IST)
ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ತಮ್ಮ ಬ್ಯಾಟಿಂಗ್ ಕಳೆಗುಂದಿರುವುದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಕಂಗೆಡಿಸಿದೆ. ಇದೇ ಕಾರಣಕ್ಕೆ ರನ್ ಮೆಷಿನ್ ಈಗ ತಮ್ಮ ಬ್ಯಾಟಿಂಗ್ ಕಡೆಗೆ ಹೆಚ್ಚು ಗಮನ ಹರಿಸಲು ಮುಂದಾಗಿದ್ದಾರೆ.

 
ಹೀಗಾಗಿ ಮುಂಬರುವ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಸೀಮಿತ ಓವರ್ ಗಳ ಪಂದ್ಯಗಳ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾಗೆ ಟಿ20 ಮತ್ತು ಏಕದಿನ ಪಂದ್ಯಗಳಿಗೆ ರೋಹಿತ್ ಶರ್ಮಾ ನಾಯಕರಾಗಲಿದ್ದಾರೆ ಎನ್ನಲಾಗಿದೆ.
 
ತಮ್ಮ ಬ್ಯಾಟಿಂಗ್ ಬಗ್ಗೆ ಗಮನಕೇಂದ್ರೀಕರಿಸಲು ಕೊಹ್ಲಿ ನಾಯಕತ್ವದ ಜವಾಬ್ಧಾರಿಯನ್ನು ರೋಹಿತ್ ಜೊತೆಗೆ ಹಂಚಿಕೊಳ್ಳಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ರವಿಶಾಸ್ತ್ರಿ ಕೂಡಾ ಕೋಚ್ ಹುದ್ದೆಯಿಂದ ಕೆಳಗಿಳಿಯಬಹುದು ಎಂದು ಈ ಮೊದಲು ವರದಿಯಾಗಿತ್ತು. ಹೀಗಾಗಿ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದಲ್ಲಿ ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಯಿದೆ.
ಇದರಲ್ಲಿ ಇನ್ನಷ್ಟು ಓದಿ :