ಮುಂಬೈ: ಮುಂಬರುವ ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿಗೇ ಕೊಕ್ ನೀಡಲಾಗಿದೆ.ಸತತ ಕ್ರಿಕೆಟ್ ನಿಂದ ಬಳಲಿರುವ ಕೊಹ್ಲಿಗೆ ಈ ಪ್ರತಿಷ್ಠಿತ ಟೂರ್ನಿಗೇ ವಿಶ್ರಾಂತಿ ನೀಡಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.ಶಿಖರ್ ಧವನ್ ಉಪನಾಯಕನಾಗಲಿದ್ದಾರೆ. ಉಳಿದಂತೆ ಕೆಎಲ್ ರಾಹುಲ್, ಅಂಬುಟಿ ರಾಯುಡು, ಮನೀಶ್ ಪಾಂಡೆ, ಕೇದಾರ್ ಜಾದವ್, ಎಂಎಸ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲದೀಪ್