ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಸೋತ ನಿರಾಸೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಟೆಸ್ಟ್ ಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಇಂದಿನಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ನೆಟ್ಸ್ ನಲ್ಲಿ ಕಠಿಣ ತರಬೇತಿ ಪಡೆದಿದ್ದಾರೆ. ಮೊದಲ ಟೆಸ್ಟ್ ನಲ್ಲೂ ಕೊಹ್ಲಿ ಏಕಾಂಗಿಯಾಗಿ ಹೋರಾಡಿದ್ದರು. ಆದರೆ ಕೊನೆಗೆ ವಿಕೆಟ್ ಕೈ ಚೆಲ್ಲಿ ಸೋಲಬೇಕಾಯಿತು.ಇನ್ನೊಂದೆಡೆ ಕೊಹ್ಲಿಯನ್ನು ಕಟ್ಟಿ ಹಾಕಲು ಇಂಗ್ಲೆಂಡ್ ಭರ್ಜರಿ ತಯಾರಿ ನಡೆಸುತ್ತಿದೆ.