ಗುವಾಹಟಿ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೀಡು ಬೀಸಾಗಿ ಬ್ಯಾಟ್ ಬೀಸಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಜೋಡಿ ಹಲವು ದಾಖಲೆಗಳನ್ನು ಮಾಡಿದೆ. ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠರಾದರು. 140 ರನ್ ಗಳಿಸಿದ ಕೊಹ್ಲಿ ನಾಯಕರಾಗಿ 14 ನೇ ಶತಕ ದಾಖಲಿಸಿದರು. ಈ ಮೂಲಕ ನಾಯಕನಾಗಿ ಅತೀ ಹೆಚ್ಚು ಶತಕ ದಾಖಲಿಸಿದ ರಿಕಿ ಪಾಂಟಿಂಗ್ ನಂತರದ ಸ್ಥಾನ ಪಡೆದರು.