ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಾಳೆಯಿಂದ ಹಗಲು ರಾತ್ರಿ ಟೆಸ್ಟ್ ಪಂದ್ಯ ನಡೆಯಲಿದ್ದು, ಇದಕ್ಕೂ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.ಕಳೆದ ವರ್ಷ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಭಾರತ ವಿರುದ್ಧ ಹಗಲು ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸಲು ಆಸಕ್ತಿ ವಹಿಸಿತ್ತು. ಆದರೆ ಆಗ ಅದಕ್ಕೆ ಬಿಸಿಸಿಐ ಒಪ್ಪಿರಲಿಲ್ಲ. ಆದರೆ ಈಗ ಸೌರವ್ ಗಂಗೂಲಿ ಆಸಕ್ತಿ ವಹಿಸಿದ್ದರಿಂದ ಪಿಂಕ್ ಬಾಲ್ ನಲ್ಲಿ ಭಾರತ ಮೊದಲ ಬಾರಿಗೆ