ಕೊನೇ ಗಳಿಗೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ ವಿರಾಟ್ ಕೊಹ್ಲಿ

ಮುಂಬೈ, ಸೋಮವಾರ, 29 ಜುಲೈ 2019 (10:09 IST)

ಮುಂಬೈ: ಇಂದು ವೆಸ್ಟ್ ಇಂಡೀಸ್ ವಿರುದ್ಧ ಕ್ರಿಕೆಟ್ ಸರಣಿಗಾಗಿ ಟೀಂ ಇಂಡಿಯಾ ಕೆರೆಬಿಯನ್‍ ರಾಷ್ಟ್ರಕ್ಕೆ ತೆರಳಲಿದೆ. ಆದರೆ ಇದಕ್ಕೆ ಮೊದಲು ನಾಯಕ ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿ ನಡೆಸುತ್ತಾರೋ ಇಲ್ಲವೋ ಎಂಬ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದೆ.


 
ರೋಹಿತ್ ಶರ್ಮಾ ಜತೆಗಿನ ವೈಮನಸ್ಯದ ಬಗ್ಗೆ ಹೆಚ್ಚಿನ ಪ್ರಶ್ನೆಗಳು ಬರುತ್ತವೆ ಎಂಬ ಕಾರಣಕ್ಕೆ ಇಂದು ಕೊಹ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲ್ಲ ಎಂಬ ಸುದ್ದಿಗಳು ಇತ್ತು. ಆದರೆ ಅದಕ್ಕೀಗ ಸ್ಪಷ್ಟನೆ ಸಿಕ್ಕಿದ್ದು, ಕೊಹ್ಲಿ ಪತ್ರಿಕಾಗೋಷ್ಠಿ ನಡೆಸುತ್ತಾರೆ ಎಂದು ಹೇಳಿದೆ.
 
ಯಾವುದೇ ವಿದೇಶ ಸರಣಿಗೆ ತೆರಳುವ ಮೊದಲು ಟೀಂ ಇಂಡಿಯಾ ನಾಯಕ ಮತ್ತು ಕೋಚ್ ಪತ್ರಿಕಾಗೋಷ್ಠಿ ನಡೆಸುವುದು ಸಂಪ್ರದಾಯ. ಆದರೆ ಈ ಬಾರಿ ಅದಕ್ಕೆ ಕೊಹ್ಲಿ ಬ್ರೇಕ್ ಹಾಕಲಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಇಂದು ಸಂಜೆ 6 ಗಂಟೆಗೆ ಕೊಹ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳುವುದು ಪಕ್ಕಾ ಆಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ವಿರಾಟ್ ಕೊಹ್ಲಿ-ರೋಹಿತ್ ನಡುವೆ ಸಂಧಾವೇರ್ಪಡಿಸಲು ಬಿಸಿಸಿಐ ಯತ್ನ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಉಂಟಾಗಿದೆ ಎನ್ನಲಾಗಿರುವ ...

news

ರೋಹಿತ್ ಜತೆ ರಗಳೆ: ವಿಂಡೀಸ್ ಪ್ರವಾಸಕ್ಕೂ ಮುನ್ನ ಪತ್ರಿಕಾಗೋಷ್ಠಿಗೇ ಬರಲ್ವಂತೆ ವಿರಾಟ್ ಕೊಹ್ಲಿ

ಮುಂಬೈ: ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಜತೆ ವೈಮನಸ್ಯದ ವದಂತಿಗಳ ಹಿನ್ನಲೆಯಲ್ಲಿ ನಾಯಕ ವಿರಾಟ್ ...

news

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಗುದ್ದಾಟದ ಬಗ್ಗೆ ಬಿಸಿಸಿಐ ಸಿಒಎ ಹೇಳಿದ್ದೇನು?

ಮುಂಬೈ: ಟೀಂ ಇಂಡಿಯಾದಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ನಡುವೆ ತೆರೆಮರೆಯಲ್ಲಿ ...

news

ಕಾಟಾಚಾರಕ್ಕೆ ನಡೆಯುತ್ತಿದೆಯಾ ಟೀಂ ಇಂಡಿಯಾ ಕೋಚ್ ಆಯ್ಕೆ ಪ್ರಕ್ರಿಯೆ?

ಮುಂಬೈ: ಟೀಂ ಇಂಡಿಯಾ ಹಾಲಿ ಕೋಚ್ ರವಿಶಾಸ್ತ್ರಿ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಹೊಸ ಕೋಚ್ ಆಯ್ಕೆಗೆ ...