ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಂತ್ಯಕ್ಕೆ ಪ್ರವಾಸಿ ವಿಂಡೀಸ್ 7 ವಿಕೆಟ್ ನಷ್ಟಕ್ಕೆ 295 ರನ್ ಗಳಿಸುವ ಮೂಲಕ ಸಾಧಾರಣ ಮೊತ್ತ ದಾಖಲಿಸಿದೆ.ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪ್ರವಾಸಿ ತಂಡ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೊಂಚ ಪ್ರತಿರೋಧ ತೋರಿದೆ. ಆರಂಭಿಕ ಬ್ಯಾಟ್ಸ್ ಮನ್ ಗಳು ವಿಫಲರಾದರೂ ಕೆಳ ಕ್ರಮಾಂಕದಲ್ಲಿ ರೋಸ್ಟನ್ ಚೇಸ್ 98 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ.