ಪುಣೆ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲ್ಲಲು ವಿಂಡೀಸ್ 284 ರನ್ ಗಳ ಗುರಿ ನೀಡಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ವಿಂಡೀಸ್ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 283 ರನ್ ಗಳಿಸಿತು. ವಿಂಡೀಸ್ ಪರ ಶೈ ಹೋಪ್ 95 ರನ್ ಗಳಿಸಿದರೆ ಶಿಮ್ರೋನ್ ಹೆಟ್ ಮೇರ್ 21 ಎಸೆತಗಳಲ್ಲಿ 37 ರನ್ ಗಳಿಸಿದರು.