ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ನಾಯಕತ್ವ ವಹಿಸಲಿದ್ದಾರೆ.ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಕೆಎಲ್ ರಾಹುಲ್ ನಾಯಕರಾಗಿ ಹೆಚ್ಚಿನ ಯಶಸ್ಸು ಪಡೆದಿಲ್ಲ. ಈ ಮೊದಲು ರಾಹುಲ್ ಒಟ್ಟು 7 ಸೀಮಿತ ಓವರ್ ಗಳ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದಾರೆ. ಈ ಪೈಕಿ ನಾಲ್ಕು ಗೆಲುವು ಮೂರು ಸೋಲು ಕಂಡಿದ್ದಾರೆ.ಜಿಂಬಾಬ್ವೆ ವಿರುದ್ಧ ಎರಡು ಪಂದ್ಯಗಳಲ್ಲಿ ಮತ್ತು ಬಾಂಗ್ಲಾದೇಶ ವಿರುದ್ಧ ಒಂದು ಪಂದ್ಯದಲ್ಲಿ ಗೆಲುವು ಸಿಕ್ಕಿತ್ತು.