ಮುಂಬೈ: ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಧೋನಿಯನ್ನು ಆಯ್ಕೆ ಮಾಡದೇ ಇರುವುದನ್ನು ನೋಡಿ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ವಿಶ್ವಕಪ್ ವಿಜೇತ ನಾಯಕನನ್ನು ಬೇಕೆಂದೇ ಕಡೆಗಣಿಸಲಾಗುತ್ತಿದೆ ಎಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.