ಲಂಡನ್: ಭಾರತ ಮತ್ತು ಶ್ರೀಲಂಕಾ ನಡುವೆ ನಿನ್ನೆ ನಡೆದ ವಿಶ್ವಕಪ್ ಕೂಟದ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಲಂಕಾ ವಿರುದ್ಧ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಭರ್ಜರಿ ಶತಕಗಳ ನೆರವಿನಿಂದ