ಕೋಲ್ಕೊತ್ತಾ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ದ.ಆಫ್ರಿಕಾ ಮತ್ತೆ ಚೋಕರ್ಸ್ ಹಣೆಪಟ್ಟಿ ಕಟ್ಟಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ 3 ವಿಕೆಟ್ ಗಳ ಸೋಲು ಅನುಭವಿಸಿದೆ.ಇದೀಗ ಆಸ್ಟ್ರೇಲಿಯಾ ಫೈನಲ್ ಪಂದ್ಯದಲ್ಲಿ ಬಲಿಷ್ಠ ಟೀಂ ಇಂಡಿಯಾ ವಿರುದ್ಧ ಆಡಲಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ ಬ್ಯಾಟಿಂಗ್ ಕುಸಿತದಿಂದಾಗಿ 49.4 ಓವರ್ ಗಳಲ್ಲಿ 212 ರನ್ ಗಳಿಗೆ ಆಲೌಟ್ ಆಯಿತು. ಒಂದು ಹಂತದಲ್ಲಿ 24 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಆಫ್ರಿಕಾಗೆ