Photo Courtesy: Twitterದಿ ಓವಲ್: ಜೂನ್ 7 ರಿಂದ ಇಂಗ್ಲೆಂಡ್ ನ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದೆ.ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟನ್ಸ್ ತಂಡದಲ್ಲಿರುವ ಟೀಂ ಇಂಡಿಯಾ ಆಟಗಾರರನ್ನು ಹೊರತುಪಡಿಸಿ ಉಳಿದೆಲ್ಲಾ ಆಟಗಾರರು ಈಗಾಗಲೇ ಇಂಗ್ಲೆಂಡ್ ತಲುಪಿದ್ದಾರೆ.ಇದೀಗ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರರಂತಹ ಸ್ಟಾರ್ ಆಟಗಾರರೂ ಅಭ್ಯಾಸ ಆರಂಭಿಸಿದ್ದಾರೆ.