ಸೌಥಾಂಪ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದಿನಿಂದ ಇಂಗ್ಲೆಂಡ್ ನ ಸೌಥಾಂಪ್ಟನ್ ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಇದು ಒಂದು ರೀತಿಯಲ್ಲಿ ಟೆಸ್ಟ್ ಕ್ರಿಕೆಟ್ ನ ವಿಶ್ವಕಪ್. ಹೀಗಾಗಿ ಈ ಪಂದ್ಯವನ್ನು ಗೆಲ್ಲುವುದು ಎರಡೂ ತಂಡಗಳಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಕೇನ್ ವಿಲಿಯಮ್ಸನ್ ಮತ್ತು ವಿರಾಟ್ ಕೊಹ್ಲಿಗೆ ಇದು ನಾಯಕತ್ವದ ಪರೀಕ್ಷೆಯಾಗಿದೆ.ಭಾರತಕ್ಕೆ ಇಲ್ಲಿ ವೇಗಿಗಳನ್ನು ಎದುರಿಸುವುದೇ ಸವಾಲಾಗಲಿದೆ. ಈಗಾಗಲೇ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಿರುವ