ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಟೆಸ್ಟ್ ಶತಕ ಗಳಿಸಿದ್ದ ಯಶಸ್ವಿ ಜೈಸ್ವಾಲ್ ತಂದೆಯ ಜೊತೆ ಮಾತನಾಡುವಾಗ ಕಣ್ಣೀರು ಹಾಕಿದ್ದರು ಎಂಬ ವಿಷಯ ಬಹಿರಂಗವಾಗಿದೆ.ಯಶಸ್ವಿ ಜೈಸ್ವಾಲ್ ಗೆ ಇದು ಪದಾರ್ಪಣೆಯ ಪಂದ್ಯವಾಗಿತ್ತು. ಆರಂಭಿಕರಾಗಿ ಕಣಕ್ಕಿಳಿದು ಎರಡು ದಿನ ಬ್ಯಾಟಿಂಗ್ ಮಾಡಿದ ಯಶಸ್ವಿ 171 ರನ್ ಗಳಿಸಿ ಔಟಾಗಿದ್ದರು.ಎರಡನೇ ದಿನ ಶತಕ ಗಳಿಸಿದ ಮೇಲೆ ತಮ್ಮ ತಂದೆಗೆ ವಿಡಿಯೋ ಕಾಲ್ ಮಾಡಿದ್ದ ಯಶಸ್ವಿ ಭಾವುಕರಾಗಿ ಕಣ್ಣೀರು ಹಾಕಿದ್ದರಂತೆ.