ಮುಂಬೈ: ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗಿದ್ದ ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ 2021 ರ ಪ್ರಶಸ್ತಿಯನ್ನು ಭಾರತ ತಂಡ ತನ್ನದಾಗಿಸಿಕೊಂಡಿದೆ. ಸಚಿನ್ ತೆಂಡುಲ್ಕರ್ ನೇತೃತ್ವದ ಭಾರತ ತಂಡ ಶ್ರೀಲಂಕಾವನ್ನು ಬಗ್ಗು ಬಡಿದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಿನ್ನೆ ನಡೆದ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ಲಂಕಾವನ್ನು 14 ರನ್ ಗಳಿಂದ ಸೋಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ