ನವದೆಹಲಿ: ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿ ಸೋಲಿಗೆ ಟಿ20 ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿರುವ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಗಿದೆ. ಮೊದಲ ಪಂದ್ಯಕ್ಕೂ ಮೊದಲೇ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಭುಜಕ್ಕೆ ಗಾಯ ಮಾಡಿಕೊಂಡಿದ್ದು ಇಂದು ನಡೆಯಲಿರುವ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.ಅಭ್ಯಾಸದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡ ಸ್ಟೀವ್ ಸ್ಮಿತ್ ರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್ ಮಾಡಿಸಲಾಯಿತು. ಗಾಯ ಗಂಭೀರವಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ