ಭಾರತ ಸರಣಿಗೂ ಮೊದಲೇ ನಿವೃತ್ತಿಯಾದ ಆಸ್ಟ್ರೇಲಿಯಾದ ಈ ಕ್ರಿಕೆಟಿಗ!

Sydney| Krishnaveni K| Last Modified ಬುಧವಾರ, 18 ಜನವರಿ 2017 (09:04 IST)
ಸಿಡ್ನಿ: ಭಾರತ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಶಾಕ್ ಎದುರಾಗಿದೆ. ಸರಣಿ ಆರಂಭಕ್ಕೆ ಮೊದಲೇ ಪ್ರಮುಖ ಬ್ಯಾಟ್ಸ್ ಮನ್ ಆಡಮ್ ವೋಗ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಿದ್ದಾರೆ.

ಕಳೆದ ನವಂಬರ್ ನಲ್ಲಿ ಶೆಫೀಲ್ಡ್ ಶೀಲ್ಡ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡುತ್ತಿರುವಾಗ ಕ್ಯಾಮ್ ಸ್ಟೀವ್ ಸನ್ ಬೌನ್ಸರ್ ತಪ್ಪಿಸಲು ಹೋಗಿ ತಲೆಗೆ ಏಟು ಮಾಡಿಕೊಂಡಿದ್ದರು. ಇದೇ ಪಂದ್ಯಾವಳಿಯಲ್ಲಿ ಹಿಂದೊಮ್ಮೆ ಫಿಲಿಪ್ ಹ್ಯೂಸ್ ತಲೆಗೆ ಚೆಂಡು ಬಡಿದು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು. ಇದರಿಂದಾಗಿ ದ. ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ವೋಗ್ಸ್ ಆಯ್ಕೆಯಾಗಿರಲಿಲ್ಲ.ಸದ್ಯಕ್ಕೆ ಫಾರ್ಮ್ ಕಳೆದುಕೊಂಡಿರುವ ಕಾರಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮುಂದುವರಿಯಲು ಇಚ್ಛಿಸುವುದಿಲ್ಲ ಎಂದು 37 ವರ್ಷದ ವೋಗ್ಸ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ

ಮೊಬೈಲ್ ಆ್ಯಪ್

ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :