ಕ್ರಿಕೆಟಿಗ ಭುವನೇಶ್ವರ್ ಕುಮಾರ್ ಗೆ ಇಂದು ಮದುವೆ ಸಂಭ್ರಮ

ನವದೆಹಲಿ| Krishnaveni| Last Modified ಗುರುವಾರ, 23 ನವೆಂಬರ್ 2017 (09:17 IST)
ನವದೆಹಲಿ: ಮೊನ್ನೆಯಷ್ಟೇ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಹೀರೋ ಆಗಿದ್ದ ವೇಗಿ ಭುವನೇಶ್ವರ್ ಕುಮಾರ್ ಗೆ ಇಂದು ಮದುವೆ ಸಂಭ್ರಮ. ತಮ್ಮ ಬಹುಕಾಲದ ಗೆಳತಿ ನೂಪುರ್ ನಗರ್ ಜತೆ ಭುವಿ ಇಂದು ಸಪ್ತಪದಿ ತುಳಿಯಲಿದ್ದಾರೆ.

ಮದುವೆಗಾಗಿ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ವಿನಾಯ್ತಿ ಪಡೆದಿದ್ದ ಭುವನೇಶ್ವರ್ ಕುಮಾರ್ ಇಂದು ಉತ್ತರ ಪ್ರದೇಶದ ಮೀರತ್ ನಲ್ಲಿ ವಿವಾಹವಾಗಲಿದ್ದಾರೆ. ಈ ವಿವಾಹ ಸಮಾರಂಭಕ್ಕೆ ಹಾಲಿ, ಮಾಜಿ ಕ್ರಿಕೆಟಿಗರು, ರಾಜಕಾರಣಿಗಳು, ಉದ್ಯಮಿಗಳು ಸಾಕ್ಷಿಯಾಗಲಿದ್ದಾರೆ.ಕೆಲ ದಿನಗಳ ಹಿಂದೆ ಭುವಿ ನೂಪುರ್ ಜತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಲಂಕಾ ವಿರುದ್ಧ ಕ್ರಿಕೆಟ್ ಸರಣಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾ ಕ್ರಿಕೆಟಿಗರು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ

ಮೊಬೈಲ್ ಆ್ಯಪ್

ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :