Widgets Magazine

ಮುಂಬೈ ಆಸ್ಪತ್ರೆಯಿಂದ ಬಿಡುಗಡೆಯಾದ ಬ್ರಿಯಾನ್ ಲಾರಾ

ಮುಂಬೈ| Krishnaveni K| Last Modified ಗುರುವಾರ, 27 ಜೂನ್ 2019 (10:08 IST)
ಮುಂಬೈ: ಹೃದಯ ತೊಂದರೆಗೆ ಸಿಲುಕಿ ಮುಂಬೈನ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದ ವೆಸ್ಟ್ ಇಂಡೀಸ್ ಕ್ರಿಕೆಟ್ ದೈತ್ಯ, ಕಾಮೆಂಟೇಟರ್ ಬ್ರಿಯಾನ್ ಲಾರಾ ಡಿಸ್ಚಾರ್ಜ್ ಆಗಿದ್ದಾರೆ.

 
ಲಾರಾ ಎದೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವಿಶ್ವಕಪ್ ಕ್ರಿಕೆಟ್ ನ ಕಾಮೆಂಟರಿ ಪ್ಯಾನೆಲ್ ನಲ್ಲಿರುವ ಲಾರಾ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ಮುಂಬೈ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದಾರೆ.
 
ಇದೀಗ ಲಾರಾ ಸಂಪೂರ್ಣ ಗುಣಮುಖರಾಗಿದ್ದು, ಫಿಟ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಮಂಗಳವಾರ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಇದರಲ್ಲಿ ಇನ್ನಷ್ಟು ಓದಿ :