ಕೇರಳ ಪ್ರವಾಹಕ್ಕೆ ವಿರಾಟ್ ಕೊಹ್ಲಿ, ಧೋನಿ ಸೇರಿ 100 ಕೋಟಿ ರೂ. ದೇಣಿಗೆ ನೀಡಿದ್ದಾರಂತೆ!

ಮುಂಬೈ| Krishnaveni K| Last Modified ಶನಿವಾರ, 25 ಆಗಸ್ಟ್ 2018 (09:42 IST)
ಮುಂಬೈ: ಕೇರಳದಲ್ಲಿ ಪ್ರವಾಹದಿಂದಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೀಡಾಗಿದ್ದು, ರಾಜ್ಯದ ಪುನರ್ ವಸತಿಗೆ ಟೀಂ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ಧೋನಿ ಸೇರಿ 100 ಕೋಟಿ ರೂ. ನೀಡಿದ್ದಾರಂತೆ! ಹಾಗಂತ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ.

ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೋ 77 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದೂ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿದೆ. ಆದರೆ ಇದು ಯಾವುದೂ ನಿಜವಲ್ಲ.


ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಂದ್ಯದ ಎಲ್ಲಾ ಆಟಗಾರರ ಶುಲ್ಕವನ್ನು ಪೀಡಿತರಿಗೆ ನೀಡುವುದಾಗಿ ಹೇಳಿದ್ದರು. ಇದು ಮಾತ್ರ ಅಧಿಕೃತ. ಅದು ಬಿಟ್ಟು ಇಂತಹ ಸುಳ್ಳು ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಯಾರೋ ಬಿಟ್ಟಿ ಪ್ರಚಾರಕ್ಕಾಗಿ ಹರಿಯಬಿಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
ಇದರಲ್ಲಿ ಇನ್ನಷ್ಟು ಓದಿ :