ಬೆಂಗಳೂರು: ಕರ್ನಾಟಕ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದು ಫೆಬ್ರವರಿ 21 ರಿಂದ ಕ್ವಾರ್ಟರ್ ಫೈನಲ್ ಪಂದ್ಯವಾಡಲಿದೆ. ಈ ಪಂದ್ಯಕ್ಕೆ ತಂಡ ಪ್ರಕಟಿಸಲಾಗಿದ್ದು ಮನೀಶ್ ಪಾಂಡೆ ತಂಡಕ್ಕೆ ಕಮ್ ಬ್ಯಾಕ್ ಆಗಿದ್ದರೆ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.