ನವದೆಹಲಿ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮತ್ತೆ ಕಾಶ್ಮೀರ ವಿಚಾರದಲ್ಲಿ ಭಾರತೀಯ ಪ್ರಧಾನಿ ನರೇಂದ್ರ ಮೋದಿಯನ್ನು ಕೆಣಕುವ ಪ್ರಯತ್ನ ನಡೆಸಿದ್ದು, ಇದಕ್ಕೆ ಗೌತಮ್ ಗಂಭೀರ್ ತಕ್ಕ ತಿರುಗೇಟು ಕೊಟ್ಟಿದ್ದಾರೆ.ಕೊರೋನಾದಿಂದ ಸಂಕಷ್ಟಕ್ಕೀಡಾದವರಿಗೆ ನೆರವಾಗಲು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಬಂದಿದ್ದ ಅಫ್ರಿದಿ ನಾನು ಜಗತ್ತಿನ ಸುಂದರ ಗ್ರಾಮಕ್ಕೆ ಬಂದಿದ್ದೇನೆ. ಹಲವು ದಿನಗಳಿಂದ ಇಲ್ಲಿಗೆ ಬರಬೇಕೆಂದುಕೊಂಡಿದ್ದೆ. ಜಗತ್ತೇ ಈಗ ಮಹಾಮಾರಿ ಸೋಂಕಿಗೆ ತುತ್ತಾಗಿದೆ. ಆದರೆ ಅದಕ್ಕಿಂತ ದೊಡ್ಡ ರೋಗ ಮೋದಿ ಮನಸ್ಸಿನಲ್ಲಿದೆ ಎಂದು ವಿವಾದಾತ್ಮಕವಾಗಿ